Connect with us

Dvgsuddi Kannada | online news portal | Kannada news online

ಹರಿಹರ: ನ.23ರಂದು ಬಿಜೆಪಿ ಜನಸಂಕಲ್ಪ ಯಾತ್ರೆ

bjp falg

ದಾವಣಗೆರೆ

ಹರಿಹರ: ನ.23ರಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಹರಿಹರ: ನ.23 ರಂದು ಹರಿಹರದ ಗಾಂಧಿ ಮೈದಾನದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಬಿಜೆಪಿ ಪಕ್ಷದಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಗೆ ಉತ್ತಮ ಜನಸ್ಪಂದನೆ ದೊರೆಯುತ್ತಿದೆ,ಮಧ್ಯ ಕರ್ನಾಟಕದ ಹರಿಹರ ನಗರದಲ್ಲಿ ನ.23 ರಂದು ನಡೆಯುವ ಸಮಾವೇಶ 2023ರ ವಿಧಾನಸಭೆ ಚುನಾವಣೆ ಗೆಲುವಿನ ದಿಕ್ಸೂಚಿಯಾಗಲಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃಧ್ದಿ ಕೆಲಸಗಳನ್ನು ಜನ ಸಾಮಾನ್ಯರಿಗೆ ತಿಳಿಸುವುದು ಹಾಗೂ ಅವರ ಪ್ರೀತಿ ವಿಶ್ವಾಸಗಳಿಸುವುದೇ ಈ ಯಾತ್ರೆಯ ಮೂಲ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಹಗಲಿರಳು ಶ್ರಮಿಸುತ್ತಿದ್ದಾರೆ.ಎಸ್ಸಿ ಮತ್ತು ಎಸ್‌ಟಿ ಜನಾಂಗದ ಬಹುದಿನಗಳ ಬೇಡಿಕೆಯಾದ ಮೀಸಲಾತಿ ಹೆಚ್ಳಳ ಮಾಡುವ ಮೂಲಕ ಜನಾಂಗದ ಸಮಗ್ರ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಬದ್ದವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ಸೇರಿದಂತೆ ಮತ್ತಿತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top