ಹರಿಹರ; ಹರಿಹರದ ಹೊರ ವಲಯದ ಕೈಗಾರಿಕ ಪ್ರದೇಶವಾದ ಹನಗವಾಡಿಯಲ್ಲಿ ಆಕಸ್ಮಕ ಬೆಂಕಿ ಬಿದ್ದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನೆಲೆ ದೊಡ್ಡ ಅಪಘಾತ ತಪ್ಪಿದಂತಾಗಿದೆ.
ಮಲೆಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಹನಗವಾಡಿ ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಬಗ್ಗೆ 112 ಹೊಯ್ಸಳ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದರ ಪೊಲೀಸರು ಪರಿಶೀಲಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ವಾಹನ ಕರೆಯಿಸಿ ಬೆಂಕಿ ನಂದಿಸಲಾಗಿದೆ.



