ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ತುಂಗಭದ್ರಾ ನದಿಯಿಂದ (tungabhadra river) ನಂದಿಗುಡಿ ಮತ್ತು ಮಳಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು (sand) ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ.
ಉಪವಿಭಾಗಾಧಿಕಾರಿ ಸಂತೋಷಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಡಗಿದ್ದು, 340 ಮೆ. ಟನ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಅಕ್ರಮ ಗಣಿಗಾರಿಕೆ ಸಂಬಂಧ ಪೊಲೀಸರ ತಂಡ ರಚನೆ ಮಾಡಲಬೇಕು. ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ತೀವ್ರ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ತಹಶೀಲ್ದಾರ್ ಗುರುಬಸವರಾಜ್, ಕಂದಾಯ ನಿರೀಕ್ಷಕ ಆನಂದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕವಿತಾ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.



