ದಾವಣಗೆರೆ: ಅಮೃತ ಭಾರತ ರೈಲ್ವೆ ನಿಲ್ದಾಣಗಳ ಪುನರ್ ನಿರ್ಮಾಣ ಯೋಜನೆಯಡಿ ಮೈಸೂರು ವಿಭಾಗದ ಹರಿಹರ ರೈಲು ನಿಲ್ದಾಣವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಯಡಿ ದೇಶದಲ್ಲಿನ 508 ರೈಲ್ವೆ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವ ಕಾಮಗಾರಿಗೆ ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 6 ರ ಬೆಳಗ್ಗೆ 9.15 ರಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು.
ಹರಿಹರದ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರಾದ ಡಾ; ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ವಿಧಾನಸಭಾ ಕ್ಷೇತ್ರದ ಬಿ.ಪಿ.ಹರೀಶ್ ರವರು ಉಪಸ್ಥಿತರಿರುವರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿರುವರು.



