ಕೊಂಡಜ್ಜಿ: ಹರಿಹರ ತಾಲ್ಲೂಕಿನ ಸಾಧು ವೀರಶೈವ ಲಿಂಗಾಯತ ಸಮಾಜದಿಂದ ಕೊಂಡಜ್ಜಿ ಗ್ರಾಮದಲ್ಲಿ ಸೆ.09ರಂದು (ಶುಕ್ರವಾರ) ಬೆಳಗ್ಗೆ 11 ಗಂಟೆಗೆ ತರಳಬಾಳು ಬೃಹ್ಮಠದ 20 ನೇ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಭಕ್ತಿ ಸಮರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 24 ರಂದು ಸಿರಿಗೆರೆಯ ಬೃಹ್ಮಠದಲ್ಲಿ ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಸಮಾರಂಭ ನಡೆಯಲಿದೆ. ಈ ಹಿನ್ನೆಲೆ ಹರಿಹರ ತಾಲ್ಲೂಕಿನ ಸಮಾಜದ ಭಕ್ತರು ದಾಸೋಹಕ್ಕೆ ಭಕ್ತಿ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಕ್ತಿ ಸಮರ್ಪಣ ಕಾರ್ಯಕ್ರಮ ಹರಿಹರ ತಾಲ್ಲೂಕಿನಲ್ಲಿ ಪ್ರತಿ ವರ್ಷ ಒಂದೊಂದು ಊರಿನಲ್ಲಿ ನಡೆಯುತ್ತಾ ಬಂದಿದ್ದು, ಈ ವರ್ಷ ಕೊಂಡಜ್ಜಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.
ಇದೇ ಸಂದರ್ಭದಲ್ಲಿ ಎಸ್ ಎಸ್ ಕೇರ್ ಟ್ರಸ್ಟ್ ಹಾಗೂ ಎಸ್ ಎಸ್ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಹದೊಂದಿಗೆ ಉಚಿತ ಆರೋಗ್ಯ ತಪಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ. ಕಣ್ಣು, ಕಿವಿ, ಮೂಗು, ಗಂಟಲು, ಚರ್ಮ,ಕೀಲು, ಸ್ರೀರೋಗ, ಮಕ್ಕಳ ರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸಹ ನಡೆಯಲಿದೆ.



