ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಮೂಲಕ ಹರಿದು ಹೋಗುವ ತುಂಗಾ ಭದ್ರಾ ನದಿ ತೀರದಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹರಿಹರ ತಹಶೀಲ್ದಾರ್ ತಿಳಿಸಿದ್ದಾರೆ
ಐತಿಹಾಸಿಕ ಮೈಲಾರ ಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತಾದಿಗಳಿಗೆ ಕುಡಿಯುವ ನೀರು ಹರಿಸುವ ಸಲುವಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಹರಿಹರ ತಾಲ್ಲೂಕಿನ ರೈತರು ಪಂಪ್‌ಸೆಟ್‌ಗಳ ಮೂಲಕ ನದಿಯಿಂದ ಜಮೀನಿಗೆ ನೀರು ಹರಿಸುವುದನ್ನು ನಿಷೇಧ ಹೇರಲಾಗಿದೆ.
ರೈತರು ಜಮೀನಿಗೆ ನೀರು ಹರಿಸಲು ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕಾಗಿ ತಾಲ್ಲೂಕಿನ ನದಿ ತೀರದಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



