ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಏಪ್ರಿಲ್ 06 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು11 ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವರು.
ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವರು. ಸಂಜೆ 5 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುವರು. ನಂತರ ಸಂಜೆ 6 ಗಂಟೆಗೆ ರಸ್ತೆಯ ಮೂಲಕ ಬೆಂಗಳೂರು ತಲುಪುವರೆಂದು ಪ್ರಕಟಣೆ ತಿಳಿಸಿದೆ.