ದಾವಣಗೆರೆ: ಮಕ್ಕಳಲ್ಲಿ ಕಾಡುವ ನ್ಯುಮೋನಿಯಾ ಮುಂತಾದ ಆರೋಗ್ಯ ಸಮಸ್ಯೆ ತಡೆಗಟ್ಟಲು ರಾಜ್ಯದಲ್ಲಿ ಪಿ.ಸಿ.ವಿ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು ಲಸಿಕೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನ.18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 2256 ಮಕ್ಕಳಿಗೆ ಪಿಸಿವಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಲಸಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



