ದಾವಣಗೆರೆ: ಸಿಟಿ ಸೆಂಟ್ರಲ್ ಆಸ್ಪತ್ರೆಯ 25ನೇ ವರ್ಷದ ಸಂಭ್ರಮ ಹಿನ್ನೆಲೆ ನಾಳೆ (ಮಾ.28) ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ತಪಾಸಣಾ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಶ್ರೀನಂದನ್ ರಾವ್ ತಿಳಿಸಿದ್ದಾರೆ.
ಹದಡಿ ರಸ್ತೆಯಲ್ಲಿರುವ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಘಟಕ-2 ಹಾಗೂ ಸ್ಪೆರ್ ಕ್ಲಿನಿಕ್ ಸಂಯುಕ್ತಾಶ್ರಯದಲ್ಲಿ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಘಟಕ-2 ರಲ್ಲಿ ಈ ಶಿಬಿರ ನಡೆಯಲಿದೆ ಎಂದರು.