Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರ ಮಕ್ಕಳಿಗೆ ಸುರ್ವಣಾವಕಾಶ; 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ರೈತರ ಮಕ್ಕಳಿಗೆ ಸುರ್ವಣಾವಕಾಶ; 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿಗಾಗಿ ಚಿತ್ರದುರ್ಗ ಜಿಲ್ಲೆಯ ಐನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಮೇ.02 ರಿಂದ 2023 ರ ಫೆಬ್ರವರಿ 28 ರವರೆಗೆ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮಾ.15 ರಿಂದ ಏ.16 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ) ದಾವಣಗೆರೆ ಇವರ ಕಚೇರಿಯಲ್ಲಿ/ಇಲಾಖಾ ವೆಬ್ ಸೈಟ್ www.horticulture.kar.nic.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ತೋಟಗಾರಿಕೆ ಉಪನಿರ್ದೇಶಕರು(ಜಿಪಂ) ಅಥವಾ ಹಿರಿಯ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ದಾವಣಗೆರೆ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 ನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top