Connect with us

Dvgsuddi Kannada | online news portal | Kannada news online

ದಾವಣಗೆರೆ:  ಭಾರೀ ಮಳೆಗೆ 41.90 ಲಕ್ಷ ನಷ್ಟ; ಹರಿಹರದಲ್ಲಿ ದಾಖಲೆಯ 57.35 ಮಿ. ಮೀ ಮಳೆ

ದಾವಣಗೆರೆ

ದಾವಣಗೆರೆ:  ಭಾರೀ ಮಳೆಗೆ 41.90 ಲಕ್ಷ ನಷ್ಟ; ಹರಿಹರದಲ್ಲಿ ದಾಖಲೆಯ 57.35 ಮಿ. ಮೀ ಮಳೆ

ದಾವಣಗೆರೆ: ನಿನ್ನೆ ( 05) ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆ ಸುರಿದ್ದು, ಅಪಾರ ಪ್ರಮಾಣದ ಬೆಳೆ, ಮನೆಗಳಿಗೆ ಹಾನಿಯಾಗಿದೆ. ಹರಿಹರದಲ್ಲಿ ದಾಖಲೆಯ 57.35 ಮಿ. ಮೀ ಮಳೆಯಾಗಿದೆ.

ಜಿಲ್ಲೆಯಲ್ಲಿ ಸರಾಸರಿ 24.60 ಮಿ.ಮೀ ಮಳೆಯಾಗಿದೆ. ಒಟ್ಟಾರೆ 41.90 ಲಕ್ಷ ರೂ. ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ. ಚನ್ನಗಿರಿ  17.31 ಮಿ.ಮೀ,  ದಾವಣಗೆರೆ 17.56 ಮಿ.ಮೀ,  ಹೊನ್ನಾಳಿ 17.9 ಮಿ.ಮೀ, ಹಾಗೂ ಜಗಳೂರು 12.9 ಮಿ.ಮೀ ಮಳೆಯಾಗಿದೆ.

harapanhalli rain dvgsuddi 2

 

ದಾವಣಗೆರೆ ತಾಲ್ಲೂಕಿನಲ್ಲಿ 01 ಎಕರೆ ಅಡಕೆ ಬೆಳೆ ಹಾನಿಯಾಗಿದ್ದು, ಅಂದಾಜು 60 ಸಾವಿರ ನಷ್ಟ ಸಂಭವಿಸಿರುತ್ತದೆ. ಹರಿಹರ ತಾಲ್ಲೂಕಿನಲ್ಲಿ 604 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ಅಂದಾಜು ರೂ.39.40 ಲಕ್ಷ. ಹೊನ್ನಾಳಿಯಲ್ಲಿ 0.20 ಎಕರೆ ಎಲೆ ಬಳ್ಳಿ ಬೆಳೆ ಹಾನಿಯಾಗಿದ್ದು, ಅಂದಾಜು 30 ಸಾವಿರ ರೂ., ನ್ಯಾಮತಿಯಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ.1 ಲಕ್ಷ. ಚನ್ನಗಿರಿ ತಾಲ್ಲೂಕಿನಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು 60 ಸಾವಿರ ರೂ. ಸೇರಿದಂತೆ ಜಿಲ್ಲೆಯಲ್ಲಿ ಮೇ. 05 ರ ಮಳೆಯಿಂದ ಒಟ್ಟು 41.90 ಲಕ್ಷ ರೂ. ಗಳ ನಷ್ಟದ ಅಂದಾಜು ಮಾಡಲಾಗಿದೆ.

ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top