ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ ತಡ ರಾತ್ರಿ ಭಾರೀ ಮಳೆಯಾಗಿದ್ದು, ಹಳ್ಳ-ಕೊಳ್ಳ, ಕೆರೆ ಕಟ್ಟೆಗಳು ಉಕ್ಕಿ ಹರಿಯುತ್ತಿವೆ. ದಾವಣಗೆರೆ ತಾಲ್ಲೂಕಿನ ಶ್ಯಾಗಲೆ ಗ್ರಾಮದ ಬಳಿಯ ಹಳ್ಳ ಉಕ್ಕಿ ಹರಿಯುತ್ತಿದೆ. ಇದರಿಂದ ದಾವಣಗೆರೆಯಿಂದ ಶ್ಯಾಗಲೆ, ಹೂವಿನಮಡು, ಮತ್ತಿ ಗ್ರಾಮ ಸಂಪರ್ಕ ಕಲ್ಪಿಸುವ ಮಾರ್ಗ ಕಡಿತಗೊಂಡಿದೆ. ಸೇತುವೆ ಮೇಲೆ ಮಳೆ ನೀರು ಉಕ್ಕಿ ಹರಿಯುತ್ತಿರುವುದರಿಂದ ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಲು ಸಾಧ್ಯವಾಗದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಸೇತುವೆ ಸಣ್ಣದಾಗಿದ್ದು, ಪ್ರತಿ ಸಲ ಮಳೆ ಬಂದಗಲೂ ಇದೆ ಪರಿಸ್ಥಿತಿ ಉಂಟಾಗುತ್ತಿದೆ. ಹೀಗಾಗಿ ಸೇತುವೆ ಎತ್ತರ ಹೆಚ್ಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದಾವಣಗೆರೆ: ಭಾರೀ ಮಳೆಗೆ ಉಕ್ಕಿ ಹರಿದ ಹಳ್ಳ; ಶ್ಯಾಗಲೆ ಗ್ರಾಮ ಸಂಪರ್ಕ ಕಡಿತ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



