ದಾವಣಗೆರೆ: ನಿನ್ನೆ ತಡ ರಾತ್ರಿಯಿಂದ ಇಂದು ಬೆಳಗ್ಗೆ ವರೆಗೆ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ ಅಪಾರದ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಸತತ ಮಳೆಗೆ ಕೆರೆ, ಹಳ್ಳ-ಕೊಳ್ಳ, ಹೊಲ-ಗದ್ದೆಗಳು ತುಂಬಿ ಹರಿಯುತ್ತಿದ್ದು, ಎಲ್ಲಿ ನೋಡಿದರೂ ನೀರು ಕಾಣಭುವಂತಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಭಾರೀ ಮಳೆಗೆ ಶಿವಮೊಗ್ಗದಿಂದ ಸವಳಾಂಗ, ಸುರಹೊನ್ನೆ, ಹೊನ್ನಾಳಿ, ನ್ಯಾಮತಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಸೇತುವೆ ಕೊಚ್ಚಿ ಹೋಗಿದೆ. ಇದರಿಂದ ಶಿವಮೊಗ್ಗ-ನ್ಯಾಮತಿ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಡೀ ಸೇತುವೆ ಕೊಚ್ಚಿ ಹೋಗಿದ್ದು, ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿ ಶಾಸಕ ರೇಣುಕಾಚಾರ್ಯ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿ, ವರುಣ ಹೊನ್ನಾಳಿ-ನ್ಯಾಮತಿ ತಾಲ್ಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಸುರಿಯುತ್ತಿದ್ದು, ಎಲ್ಲ ಕಡೆ ಮಳೆ ನೀರು ಉಕ್ಕಿ ಹರಿಯುತ್ತಿದೆ. ಇದರಿಂದ ನ್ಯಾಮತಿ ಮುಖ್ಯ ರಸ್ತೆಯ ಸೇತುವೆ ಕೊಚ್ಚಿ ಹೋಗಿದೆ. ನಾನು ಈಗಾಲೇ ಎಲ್ಲಾ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ಮಾಡುವಂತೆ ಸೂಚನೆ ಕೊಟ್ಟಿದ್ದು , ನಾನು ಕೂಡ ಎಲ್ಲಾ ಪ್ರವಾಸ ರದ್ದು ಮಾಡಿ ಬೆಳಗ್ಗೆಯಿಂದ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಅವಳಿ ತಾಲ್ಲೂಕಿನಲ್ಲಿ ಭಾರೀ ಮಳೆಗೆ ಮೆಕ್ಕೆಜೋಳ, ಶೆಂಗಾ, ಈರುಳ್ಳಿ, ಹತ್ತಿ, ಅಡಿಕೆ ಬೆಳಗೆ ಅಪಾರ ಪ್ರಮಾಣದ ಬೆಳೆ ಹಾನಿಯತಾಗಿದೆ. ಅಧಿಕಾರಿಗಳು ಎರಡು ದಿನ ಮನೆ ಸೇರದೆ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಮಕ್ಕಳು ಶಾಲೆಗೆ ಹೋಗಲು ಸಾಧ್ಯವಿಲ್ಲದ ಸ್ಥಳಗಳಿಗೆ ರಜೆ ಘೋಷಣೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.



