Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 4.1 ಮಿ.ಮೀ ಮಳೆ; 2 ಕೋಟಿ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 4.1 ಮಿ.ಮೀ ಮಳೆ; 2 ಕೋಟಿ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಆಗಸ್ಟ್ 10 ರಂದು  4.1ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 218.90 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ  9.0 ಮಿ.ಮೀ, ದಾವಣಗೆರೆ  2.9 ಮಿ.ಮೀ, ಹರಿಹರ 1.7 ಮಿ.ಮೀ, ಹೊನ್ನಾಳಿ  3.5 ಮಿ.ಮೀ, ಜಗಳೂರು  1.7 ಮಿ.ಮೀ, ನ್ಯಾಮತಿ 5.7ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 9 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 2.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 02 ಲಕ್ಷ, 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.4.00 ಲಕ್ಷ, 01 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ.0.30 ಲಕ್ಷ, ಒಟ್ಟು ರೂ 6.30 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.ಹೊನ್ನಳಿ ತಾಲ್ಲೂಕು ವ್ಯಾಪ್ತಿಯಲ್ಲಿ 22 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 80.00 ಲಕ್ಷ, 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2.00 ಲಕ್ಷ, ಒಟ್ಟು ರೂ. 82.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 15.00 ಲಕ್ಷ, 17 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 51.00 ಲಕ್ಷ ಹಾಗೂ 11 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 5.50 ಲಕ್ಷ, ಒಟ್ಟು ರೂ. 71.50 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 6 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 21.50 ಲಕ್ಷ, 9 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 3.70 ಲಕ್ಷ, 10 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ. 28.50 ಲಕ್ಷ, 10 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2.70 ಲಕ್ಷ, ಒಟ್ಟು ರೂ. 56.40 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ.218.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top