ದಾವಣಗೆರೆ: ಬೈಕ್ ಸವಾರರಿಗೆ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ (ಫೆ.21) ಹೆಲ್ಮೆಟ್ (helmet) ಜಾಗೃತಿ (Awareness) ಮೂಡಿಸಲಾಯಿತು. ಉತ್ತಮ ಗುಣಮಟ್ಟದ ಹೆಲ್ಮೆಟ್(High quality helmet ) ಧರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದು, ಕಳಪೆ ಬದಲು ಗುಣಮಟ್ಟದ ಹೆಲ್ಮೆಟ್ ತಂದು ಠಾಣೆಗೆ ತೋರಿಸುವರೆಗೂ ಬೈಕ್ ಲಾಕ್ ಮಾಡುವಂತೆ ಎಚ್ಚರಿಕೆ ನೀಡಿದರು.
ದಾವಣಗೆರೆ: ಕರ್ತವ್ಯ ಲೋಪ ಆರೋಪ; ಮೂವರು ಪೊಲೀಸರ ಅಮಾನತು ಮಾಡಿ ಎಸ್ಪಿ ಆದೇಶ
ದಾವಣಗೆರೆ ನಗರದ ವಿವಿಧ ಕಡೆ ಸಂಚರಿಸಿ ದ್ವಿಚಕ್ರ ವಾಹನ ಸವಾರರಿಗೆ ಉತ್ತಮ ಗುಣ ಮಟ್ಟದ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಸಂಚಾರ ನಿಯಮಗಳ ಪಾಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸಿದರು. ಉತ್ತಮ ಗುಣ ಮಟ್ಟದ ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭ ದಲ್ಲಿ ಜೀವ ರಕ್ಷಣೆ ಸಾಧ್ಯ ಎಂದು ತಿಳಿಸಿದರು.
ದಾವಣಗೆರೆ: ಸರಣಿ ಮನೆ ಕಳ್ಳತನ ಆರೋಪಿಗಳ ಬಂಧನ; 5.5 ಲಕ್ಷ ಮೌಲ್ಯದ ಸ್ವತ್ತು ವಶ
ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ವಾಹನ ಸಂಚಾರ ನಿಯಂತ್ರಣ ಪರಿಶೀಲಿಸಿ, ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ವಾಹನ ಸವಾರರಿಗೆ ಸಂಚಾರ ನಿಯಮಗಳ ಪಾಲನೆ ಬಗ್ಗೆ ತಿಳಿಸಿದರು.
ದಾವಣಗೆರೆ: ಗಿಡ-ಮರ ಕಡಿತಲೆ ಮಾಡಿದ್ರೆ ಕಾನೂನು ಕ್ರಮ
ಹೆಲ್ಮೆಟ್ ಧರಿಸದೇ ಹಾಗೂ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸದೇ ಇರುವ ದ್ವಿಚಕ್ರ ವಾಹನ ಸವಾರರ ವಾಹನಗಳನ್ನು ತಡೆದು ಠಾಣೆಗೆ ತೆಗೆದುಕೊಂಡು ಹೋಗಿದ್ದು, ನಂತರ ಬೈಕ್ ಸವಾರರು ಹೆಲ್ಮೆಟ್ ತಂದು ತೋರಿಸಿದ ಮೇಲೆ ಎಚ್ಚರಿಕೆ ನೀಡಿ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ನಗರ ಡಿವೈಎಸ್ಪಿ
ಶರಣಬಸವೇಶ್ವರ ಬಿ, ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು



