ದಾವಣಗೆರೆ: ಸಿಎಂ ಸಿದ್ದರಾಮಯ್ಯ ಸರ್ಕಾರ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ್ರೆ ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕಾಗುತ್ತದೆ .ಇದು ಕಾಂಗ್ರೆಸ್ ಸರ್ಕಾರವಲ್ಲ, ತುಘಲಕ್ ಸರ್ಕಾರ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ನಿಷೇಧ ವಿಚಾರಕ್ಕ ಹಿಂದೆ ನಮ್ಮ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಕಾಂಗ್ರೆಸ್ ಸರ್ಕಾರ ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸಲು ಅವಕಾಶ ನೀಡಿಬೇಕಾಗುತ್ತೆ, ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ. ಸಿದ್ದರಾಮಯ್ಯ ಅವರು, ಊಟ, ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಇರೋದು ಕಾಂಗ್ರೆಸ್ ನೇತೃತ್ವದ ಸರ್ಕಾರವಲ್ಲ. ಟಿಪ್ಪು ಸುಲ್ತಾನ್ ಸಂತತಿಯ ತುಘಲಕ್ ಸರ್ಕಾರ. ಎಲ್‌ಕೆಜಿಯಿಂದ ಕಾಲೇಜಿನವರೆಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, 2021ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ವಿಚಾರ ಕೇಸ್ ದಾಖಲಾಯಿತು. ನಂತರ ಈ ವಿಚಾರ ರಾಜ್ಯದಲ್ಲಿ ದೊಡ್ಡ ಘಟನೆ ಆಯ್ತು ಎಂದರು.



