ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದೆ. ಇದರ ಬೆನ್ನಲ್ಲೇ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಪ್ರತಿಕ್ರಿಯೆ ನೀಡಿದ್ದು, ಹೇಳಿರುವುದರಲ್ಲಿ ತಪ್ಪೇನಿದೆ..? ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಅವರವರ ಸಮುದಾಯಕ್ಕೆ ಅವರದ್ದೇ ಆದ ಸಂಪ್ರದಾಯವಿರುತ್ತದೆ. ಸಿಎಂ ಹೇಳಿಕೆಯಲ್ಲಿ ಸ್ಪಷ್ಟನೆ ಇದೆ. ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಹೇಳಿರುವುದು ಸರಿ ಇದೆ ಎಂದು ಹೇಳಿದ್ದಾರೆ.



