ದಾವಣಗೆರೆ: ನಾಳೆ (ಸೆ.24) ನಡೆಯಲಿರುವ ನಗರದ ಹೈಸ್ಕೂಲ್ ಮೈದಾನದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ಪೊಲೀಸ್ ಬಂದೋಬಸ್ತ್ ಕುರಿತು ಇಂದು ಡಿ ಎ ಅರ್ ಮೈದಾನದಲ್ಲಿ
ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕರ್ತವ್ಯ ನಿರ್ವಹಿಸುವಂತೆ ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್. ಬಿ. ಬಸರಗಿ , ಎ ಎಸ್ ಪಿ ಕನ್ನಿಕಾ ಸಿಕ್ರಿವಾಲ್, ಡಿವೈಎಸ್ಪಿ ನರಸಿಂಹ ವಿ ತಾಮ್ರ ಧ್ವಜ, ಬಸವರಾಜ್ ಬಿ.ಎಸ್ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.



