ದಾವಣಗೆರೆ;ವಿಧಾನಸಭಾ ಚುನಾವಣೆ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಲಾಗಿದೆ. ಮಲ್ಲಿಗೇನಹಳ್ಳಿ ಗ್ರಾಮದ ಮಧು(24) ಎಂಬಾತನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆದಿದೆ. ಬಿಜೆಪಿ ಕಾರ್ಯಕರ್ತರಾದ ಪ್ರವೀಣ್, ಪ್ರಕಾಶ್ ಎಂಬುವರ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಿ.ಜಿ. ಶಾಂತನಗೌಡ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ವೇಳೆ ಮಾಜಿ ಶಾಸಕ ರೇಣುಕಾಚಾರ್ಯ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



