ದಾವಣಗೆರೆ: ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗುತ್ತೆಪ್ಪ (60) ಮೃತಪಟ್ಟವರಾಗಿದ್ದಾರೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಗುತ್ತೆಪ್ಪ ಮನೆಯಿಂದ ಹೊರಬಂದಾಗ ಏಕಾಏಕಿ ಮಂಗಗಳು ದಾಳಿ ನಡೆಸಿವೆ. ದಾಳಿಯಿಂದ ಗುತ್ತೆಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಆಗಮಿಸಿ ಗುತ್ತೆಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅರಕೆರೆ ಗ್ರಾಮದಲ್ಲಿ ಕರಡಿ, ಚಿರತೆ, ಮಂಗಗಳ ಕಾಟ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದರು.