ದಾವಣಗೆರೆ; ಬೀಕರ ಅಪಘಾತದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಹೋಬಳಿಯ ಐನೂರು ಗ್ರಾಮದ ಬಳಿ ನಡೆದಿದೆ.
ಹೊನ್ನಾಳಿ ತಾಲ್ಲೂಕಿನ ಹನಗವಾಡಿ ಗ್ರಾಮದ ಗಣೇಶ್ (22) ಮೃತಪಟ್ಟ ಯುವಕನಾಗಿದ್ದಾನೆ. ಚಾಲನೆಯಲ್ಲಿದ್ದ ಟ್ರ್ಯಾಕ್ಟರ್ ಏಕಾಏಕಿ ನಿಯಂತ್ರಣ ತಪ್ಪಿ ಪಕ್ಕದ ಭತ್ತದ ಗದ್ದೆಯಲ್ಲಿ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ಕೆಳಗೆ ಯುವಕ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟ್ರ್ಯಾಕ್ಟರ್ ಸಾಸ್ವೆಹಳ್ಳಿಯ ಮಾಲೀಕರಿಗೆ ಸೇರಿದ್ದಾಗಿದೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.