ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು (horticulture crop) ಬೆಳೆಯಲು ಅರ್ಹ ರೈತರಿಂದ (farmer) ಅರ್ಜಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದಡಿ ಸಣ್ಣ, ಅತಿಸಣ್ಣ, ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು.
ಯಾವೆಲ್ಲಾ ಬೆಳೆ ಬೆಳೆಯಬಹುದು..?: ಈ ಯೋಜನೆಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯದೆಲೆ, ತೆಂಗು, ಮಾವು, ಸಪೋಟ, ಸೀಬೆ, ಅಂಗಾಂಶ ಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು,ಕೋಕೋ, ನೇರಳೆ, ಸೀತಾಫಲ, ಡ್ರಯಾಗನ್ ಫ್ರಟ್ಸ್,ಮಲ್ಲಿಗೆ, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು
ಅನುಷ್ಠಾನಗೊಳಿಸಲಾಗುತ್ತಿದೆ.
ಆಸಕ್ತ ರೈತರು ಅಗತ್ಯದಾಖಲಾತಿಗಳೊಂದಿಗೆ ಮೇ 10 ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹರಿಹರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯಿತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ
ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ
ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.



