Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ:https://shp.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top