ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ವರ್ಗದ ವಿದ್ಯಾರ್ಥಿಗಗಳು ಸಲ್ಲಿಸಬಹುದು.
ಪೋಷಕರ ವಾರ್ಷಿಕ ಆದಾಯ ಮಿತಿ-ಪ್ರವರ್ಗ-1, ಎಸ್.ಸಿ. & ಎಸ್.ಟಿ. ಸೇರಿದವರಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಜಾತಿಯವರೆಗೆ ರೂ.1.00 ಲಕ್ಷ ಮಿತಿ ಇರುತ್ತದೆ. ಅರ್ಜಿಯನ್ನು www.bcwd.karnataka.gov.in ನಲ್ಲಿ ಸಲ್ಲಿಸಬೇಕು. ಫೆ.10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೊಸ ವಿದ್ಯಾರ್ಥಿಗಳು ಜ.30 ರಿಂದ ಫೆ.10 ರವರೆಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ಸಲ್ಲಿಸುವ ಅರ್ಜಿಯನ್ನು, ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ದಾಖಲೆಗಳೊಂದಿಗೆ, ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ಫೆ.12 ಕೊನೆಯ ದಿನವಾಗಿರುತ್ತದೆ. ಫೆ.15 ಮತ್ತು 16 ರಂದು ಹೊಸ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು, ಆಯ್ಕೆ ಸಮಿತಿ ಸಭೆಯನ್ನು ನಡೆಸಲಾಗುವುದು. ಫೆ.18 ರಂದು ಆಯ್ಕೆ ಸಮಿತಿಯ ಪಟ್ಟಿಯನ್ನು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಲಯಕ್ಕೆ ಪ್ರವೇಶವನ್ನು ಫೆ.18 ರಿಂದ 25 ರೊಳಗೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-8050370006ನ್ನು ಸಂಪರ್ಕಿಸಬಹುದು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಫೆ.15 ರೊಳಗಾಗಿ ಕೋವಿಡ್-19 ಟೆಸ್ಟ್À ಮಾಡಿಸಿದ ಪ್ರಮಾಣ ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಇರಿಸಿಕೊಳ್ಳತಕ್ಕದ್ದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



