Connect with us

Dvgsuddi Kannada | online news portal | Kannada news online

ದಾವಣಗೆರೆ: ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಇರುತ್ತದೆ ಅರ್ಜಿಯನ್ನು ವೆಬ್ ಸೈಟ್ www.bcwd.karnataka.gov.in ಸಲ್ಲಿಸಬೇಕು. ಸೆ.12 ಅರ್ಜಿ ಸಲ್ಲಿಸಲು ಕೊನೆಯದಿನವಾಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಸಂಬಂಧಿಸಿದ ತಾಲ್ಲೂಕು ಕಲ್ಯಾಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top