Connect with us

Dvgsuddi Kannada | online news portal | Kannada news online

HSR ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್ ಲೈನ್ ; 15 ದಿನ ಮಾತ್ರ ಬಾಕಿ…!!!; ಅವಧಿಯೊಳಗೆ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ರೆ ದಂಡ ಫಿಕ್ಸ್…

ದಾವಣಗೆರೆ

HSR ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್ ಲೈನ್ ; 15 ದಿನ ಮಾತ್ರ ಬಾಕಿ…!!!; ಅವಧಿಯೊಳಗೆ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ರೆ ದಂಡ ಫಿಕ್ಸ್…

ದಾವಣಗೆರೆ: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ (ಎಚ್ ಎಸ್ ಆರ್ ಪಿ) ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ. ಈ ಅವಧಿಯೊಳಗೆ ಪ್ಲೇಟ್ ಅಳವಡಿಸಿಕೊಳ್ಳದಿದ್ರೆ ದ‌ಂಡ ಹಾಕಲಾಗುತ್ತದೆ.

2019ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಯಿಸಿದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲೀಕರು ಆನ್‍ಲೈನ್ ವೆಬ್‍ಸೈಟ್ www.siam.in, hsrp karnataka, book my hsrp ಮತ್ತು book my hsrp ಗೆ ಭೇಟಿ ನೀಡಿ ನೋಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.siam.in/hrspsubmit.aspx?mpgid=91&pgidtrail=91 ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ, ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು. ಕಾಯ್ದಿರಿಸಿದ ಸಮಯಕ್ಕೆ ಸರಿಯಾಗಿ ಹೋಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು. ಇದಲ್ಲದೇ ಮನೆಗೆ ಕರೆಸಿಕೊಳ್ಳಲು ಅವಕಾಶವೂ ಸಹ ಇದೆ.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top