ಮೂವರಲ್ಲಿ ಒಬ್ಬರಿಗೆ ಶುದ್ಧನೀರಿನ ಕೊರತೆ; ನೀರನ್ನು ಪ್ರಯೋಗಾಲಯದಲ್ಲಿ ತಯಾರಿಸಲು ಸಾಧ್ಯವಿಲ್ಲ: ಡಾ. ದೇವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮುಂಬರುವ ದಿನಗಳಲ್ಲಿ ನೀರು ಅತ್ಯಂತ ಮಹತ್ವದ ಸಂಪನ್ಮೂಲವಾಗಲಿದ್ದು, ಪ್ರಸ್ತುತ ವಿಶ್ವದಲ್ಲಿ ಮೂರರಲ್ಲಿ ಒಬ್ಬರಿಗೆ ಶುದ್ಧನೀರಿನ ಕೊರತೆ ಇದೆ ಎಂದು  ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ದೇವರಾಜ ಟಿ.ಎನ್ ಅಭಿಪ್ರಾಯಪಟ್ಟರು.

ಮಹೇಶ್ ಪದವಿಪೂರ್ವ ಕಾಲೇಜ್‌ನಲ್ಲಿ ಆಯೋಜಿಸಿದ್ದ ‘ವಿಶ್ವಜಲ ದಿನಾಚರಣೆ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, 1993  ರಿಂದಲೂ ವಿಶ್ವಜಲ ದಿನಾಚರಣೆಯನ್ನು ಪ್ರಪಂಚದೆಲ್ಲಡೆ ಆಚರಿಸುತ್ತದೆ.  ಪ್ರಸ್ತುತ ವಿಶ್ವದಲ್ಲಿ ಮೂರರಲ್ಲಿ ಒಬ್ಬರಿಗೆ ಶುದ್ಧನೀರಿನ ಕೊರತೆ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ಉಲ್ಬಣಿಸುವ ಎಲ್ಲಾ ಲಕ್ಷಣಗಳಿವೆ ಎಂದರು.

ನೀರನ್ನು ಪ್ರಯೋಗಾಲೆಯಗಳಲ್ಲಿ ತಯಾರಿಸಲು ಸಾಧ್ಯವಿಲ್ಲದಿರುವುದರಿಂದ ಪ್ರತಿಯೊಬ್ಬ ನಾಗರೀಕರು ನೀರನ್ನು ಮಿತವಾಗಿ ಬಳಸುವುದರ ಜೊತೆಗೆ ಸಂರಕ್ಷಣೆಗೆ ಮುಂದಾಗಬೇಕೆಂದರು. ಪ್ರಾಂಶುಪಾಲರಾದ ಡಾ. ಸಂತೋಷ್ ರವರು ಮಾತನಾಡಿ ಜಲ ಸಂರಕ್ಷಣೆ ಬಗ್ಗೆ ಯುವ ಜನರಿಗೆ ಅರಿವು ಮೂಡಿಸುವುದು ಅಗತ್ಯವಿದೆ ಎಂದರು,  ಕಾರ್ಯಕ್ರಮದಲ್ಲಿ ವಿಸ್ತರಣಾ ತಜ್ಞರಾದ ಶ್ರೀ ರಘುರಾಜ ಜೆ., ಕಾಲೇಜಿನ ಶಿಕ್ಷ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *