ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಆ.15 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಧ್ವಜಾರೋಹಣ ನೆರೆವೇರಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪ.ಪಂ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ ರಾಮಚಂದ್ರ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರಾದ ಡಾ.ವೈ.ಎ ನಾರಾಯಣಸ್ವಾಮಿ, ಮಾಯಕೊಂಡ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಪ್ರೊ.ಲಿಂಗಣ್ಣ ಉಪಸ್ಥಿತಿ ಇರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮೋಹನ್ ಕುಮಾರ್ ಕೊಂಡಜ್ಜಿ, ಎಸ್. ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ. ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಮೇಯರ್ ಆರ್.ಜಯಮ್ಮ, ದೂಡಾಅಧ್ಯಕ್ಷ ಕೆ.ಎಂ.ಸುರೇಶ ಸೇರಿದಂತೆ ವಿಧಾನಪರಿಷತ್ ಸದಸ್ಯರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರು ಹಾಗೂ ಉನ್ನತ ಅಧಿಕಾರಿಗಳು ಪಾಲ್ಗೊಳ್ಳುವರು. ಅಂದು ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕುವೆಂಪು ಕನ್ನಡ ಭವನದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



