ದಾವಣಗೆರೆ: ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ವತಿಯಿಂದ ದಾವಣಗೆರೆಯಲ್ಲಿ ಇದೇ ಅಕ್ಟೋಬರ್ 22 ರಿಂದ 29 ರ ವರೆಗೆ ಅಂತರಾಷ್ಟ್ರೀಯ ಟೆನ್ನೀಸ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಮಾಹಿತಿ ನೀಡಿದ್ದಾರೆ.
ಈ ಪಂದ್ಯಾವಳಿಯಲ್ಲಿ ಅಮೆರಿಕಾ, ಸ್ವಿಜ್ಜರ್ ಲ್ಯಾಂಡ್, ಸ್ವೀಡನ್ , ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಅನೇಕ ರಾಷ್ಟ್ರಗಳ 400 ಕ್ಕೂ ಹೆಚ್ಚು ಆಟಗಾರರು ಭಾಗವಹಿಸುತ್ತಿದ್ದಾರೆ. ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ 4 ಸಿಂಥಟೆಕ್ ಅಂಕಣಗಳಲ್ಲಿ ಪಂದ್ಯಾವಳಿಗಳು ನಡೆಯಲಿವೆ ಎಂದರು.
ಬರ ಹಿನ್ನಲೆ ಖಾತರಿಯಡಿ 150 ದಿನ ಕೂಲಿ ಹೆಚ್ಚಳಕ್ಕೆ ಪ್ರಸ್ತಾವನೆ; ಬರಗಾಲದ ಹಿನ್ನಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಳ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಯಾರು 100 ದಿನಗಳನ್ನು ಪೂರೈಸುವರು, ಅವರಿಗೆ ಹೆಚ್ಚುವರಿಯಾಗಿ 50 ದಿನಗಳ ಕೂಲಿಯನ್ನು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು ಇದಕ್ಕೆ ಮಂಜೂರಾತಿ ಸಿಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದರು.