ದಾವಣಗೆರೆ: ಮನೆಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳನನ್ನು ಜಿಲ್ಲೆಯ ಜಗಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಬರೋಬ್ಬರಿ 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ ಸುಮಾರು 25 ಲಕ್ಷ ರೂಪಾಯಿ ಬೆಲೆ ಬಾಳುವ 503 ಗ್ರಾಂ ಬಂಗಾರದ ಆಭರಣ ವಶಕ್ಕೆಪಡೆದುದ್ದು, ಇನ್ನು ಉಳಿದ ಬಂಗಾರ ಮತ್ತು ಬೆಳ್ಳಿ ಪತ್ತೆಯಾಗಬೇಕಾಗಿರುತ್ತದೆ. ಈ ಪ್ರಕರಣಗಳಲ್ಲಿ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆ ಮುಂದುವರೆದಿದೆ.
ದಿನಾಂಕಃ-07.11.2022 ರಂದು ರಾತ್ರಿ ಜಗಳೂರು ಪಟ್ಟಣದ ದೇವೇಗೌಡ ಬಡಾವಣೆಯಲ್ಲಿರುವ ಮಂಜುನಾಥ್ ಎಂಬವರ ಮನೆಯಲ್ಲಿ 260 ಗ್ರಾಂ ಬಂಗಾರ ಮತ್ತು 6 ಕೆಜಿ 328 ಗ್ರಾಂ ಬೆಳ್ಳಿ ಸಾಮಾನುಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ಹೆಚ್ಚುವರಿ ಸಹಾಯಕ ಪೊಲೀಸ್ ಅಧೀಕ್ಷಕಿ ಕನ್ನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ ಜಗಳೂರು ಪೊಲೀಸ್ ನಿರೀಕ್ಷಕ ಶ್ರೀನಿವಾಸ ರಾವ್ ಎಂ, ಮತ್ತು ಜಗಳೂರು ಪೊಲೀಸ್ ಠಾಣೆಯ ಅಪರಾಧ ತಂಡ ಹಾಗು ಗ್ರಾಮಾಂತರ ಉಪವಿಭಾಗದ ಅಪರಾಧ ತಂಡವು ಜಗಳೂರು ಪಟ್ಟಣದ ಹೊರವಲಯದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನು ಹಿಡಿದು ವಿಚಾರಣೆ ಪ್ರಕರಣ ಪತ್ತೆಯಾಗಿದೆ.
ಆರೋಪಿಯು ಜಗಳೂರು ಪೊಲೀಸ್ ಠಾಣೆ,ಚಿತ್ರದುರ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣೆಯ ಒಂದು ಪ್ರಕರಣ, ಚಿತ್ರದುರ್ಗ ಜಿಲ್ಲೆಯ ಬಡಾವಣೆ ಪೊಲೀಸ್ ಠಾಣೆಯ ಎರಡು ಪ್ರಕರಣ ಹಾಗೂ ಚಿಕ್ಕಮಗಳೂರು ಜಿಲ್ಲೆ ಟೌನ್ ಪೊಲೀಸ್ ಠಾಣೆಯ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಜಗಳೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀನಿವಾಸ ರಾವ್ ಎಂ, ಪೊಲೀಸ್ ಉಪನಿರೀಕ್ಷಕ ಎಸ್.ಡಿ.ಸಾಗರ, ಸಿಬ್ಬಂದಿಗಳಾದ ಬಸವರಾಜ, ಮಾರುತಿ, ನಾಗಭೂಷಣ, ಹನುಮಂತ ಕವಾಡಿ, ದಾವಣಗೆರೆ ಗ್ರಾಮಾಂತರ ಉಪವಿಭಾಗ ಕಛೇರಿಯ ಅಪರಾಧ ತಂಡದ ಸಿಬ್ಬಂದಿಗಳಾದ ಶಯಾಸೀನ್ ಉಲ್ಲಾ ಎ.ಎಸ್.ಐ, ಸೈಯದ್ ಗಫಾರ್, ನಾಗರಾಜಯ್ಯ ಹಾಗು ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಗಳಾದ ರಾಘವೇಂದ್ರ ಮತ್ತು ಶಾಂತಕುಮಾರ ಅವರನ್ನು ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಶ್ಲಾಘಿಸಿದ್ದಾರೆ.



