ದಾವಣಗೆರೆ: ಬಿಜೆಪಿ ಈ ಬಾರಿ 150 ಸ್ಥಾನ ಗೆಲ್ಲಲಿದ್ದು, ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಜಗಳೂರಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ವಿ. ರಾಮಚಂದ್ರ ಪರ ಬಿಎಸ್ ವೈ ಅಬ್ಬರ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಸ್ಪಷ್ಟವಾಗಿದೆ. 150 ಸ್ಥಾನದಲ್ಲಿ ಗೆದ್ದು ಸ್ಪಷ್ಟ ಬಹುಮತದ ಸರ್ಕಾರ ರಚನೆಯಾಗಲಿದೆ. ಹಾಗೆಯೇ ಜಗಳೂರಲ್ಲಿ ಎಸ್. ವಿ. ರಾಮಚಂದ್ರ 50 ಸಾವಿರ ಅಂತರದಲ್ಲಿ ಗೆದ್ದು ಬರಲಿದ್ದಾರೆ ಎಂದರು.
ಯಡಿಯೂರಪ್ಪ ಅವರು ಅಭ್ಯರ್ಥಿ ರಾಮಚಂದ್ರ ಜತೆ ಜಗಳೂರಿನ ಮುಖ್ಯ ಬೀದಿಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಅಬ್ಬರ ಪ್ರಚಾರ ನಡೆಸಿದರು. ಈ ವೇಳೆ ಕಾರ್ಯಕರ್ತರು ಬಿಜೆಪಿ, ಎಸ್.ವಿ.ರಾಮಚಂದ್ರಪ್ಪ ಪರ ಘೋಷಣೆ ಕೂಗಿದರು.