ದಾವಣಗೆರೆ: ಸರ್ಕಾರ ರೈತರಿಗೆ ನೀಡಬೇಕಿರುವ ರಾಗಿ ಖರೀದಿಯ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬಾಕಿ ಹಣ ನೀಡದ ಸರ್ಕಾರದ ವಿರುದ್ಧ ರೈತರು ಆಕ್ರೋಶಗೊಂಡು ಜಗಳೂರು ಪಟ್ಟಣದಲ್ಲಿನ ಆಹಾರ ಇಲಾಖೆಯ ಗೋದಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಆಗಮಿಸಿದ ಶಾಸಕ ದೇವೇಂದ್ರಪ್ಪ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ವಾರದೊಳಗೆ ರೈತರಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರ ರೈತರಿಂದ ರಾಗಿ ಖರೀದಿಸಿ 1 ವರ್ಷವಾಗಿದ್ದು, ನೀಡಬೇಕಿರುವ 5 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ಕೈಗಡಿದ್ದರು..



