Connect with us

Dvgsuddi Kannada | online news portal | Kannada news online

ದಾವಣಗೆರೆ: ಕರವೇ ತಾಲ್ಲೂಕು ಅಧ್ಯಕ್ಷನ ಭೀಕರ ಹತ್ಯೆ ; ಇಬ್ಬರು ಆರೋಪಿಗಳ ಬಂಧನ- ಎಸ್ ಪಿ

IMG 20230108 155514

ದಾವಣಗೆರೆ

ದಾವಣಗೆರೆ: ಕರವೇ ತಾಲ್ಲೂಕು ಅಧ್ಯಕ್ಷನ ಭೀಕರ ಹತ್ಯೆ ; ಇಬ್ಬರು ಆರೋಪಿಗಳ ಬಂಧನ- ಎಸ್ ಪಿ

ದಾವಣಗೆರೆ: ಕರವೇ ತಾಲ್ಲೂಕು ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಜಿಲ್ಲೆಯ ಜಗಳೂರು ತಾಲ್ಲೂಕಿನ ಕರವೇ ಅಧ್ಯಕ್ಷ ರಾಮಕೃಷ್ಣ (30) ಭೀಕರವಾಗಿ ಕೊಚ್ಚಿ ಹತ್ಯೆ ‌ಮಾಡಲಾಗಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಹತ್ಯೆ ನಡೆದಿದೆ. ಶನಿವಾರ ರಾತ್ರಿ ಹೊಸಕೆರೆ ಡಾಬಾದಲ್ಲಿ ರಾಮಕೃಷ್ಣ ಮತ್ತು ಇತರರು ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಅರ್ಜುನ್, ಪ್ರಶಾಂತ ಎಂಬುವರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.

ರಾಮಕೃಷ್ಣ ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಕು ಅಧ್ಯಕ್ಷರಾಗಿದ್ದರು. ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು.ಪಿಡಿಓ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟ ಮಾಡುತ್ತಿದ್ದರು. ಸ್ಥಳಕ್ಕೆ ಎಸ್ಪಿ ರಿಷ್ಯಂತ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top