ದಾವಣಗೆರೆ: ಖಾಸಗಿ ಬ್ಯಾಂಕಿಗೆ ಸೇರಿದ ಎಟಿಎಂ ಒಡೆದು ಹಣ ದೋಚಿ ಪರಾರಿಯಾದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ.
ಜಗಳೂರಿನಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಬ್ಯಾಂಕ್ ಎಟಿಎಂ ಮುರಿದು ಹಣ ದೋಚಿದ್ದಾರೆ. ಬೆಳಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಮಹೇಶ್ ಹೊಸಪೇಟೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿದರು. ಪ್ರಕರಣ ಸಂಬಂಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.