ದಾವಣಗೆರೆ: ಜಿಲ್ಲೆಯ ಜಗಳೂರು ಪಟ್ಟಣ ವ್ಯಾಪ್ತಿಯ ನಿವೇಶನ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಆಗಸ್ಟ್ 25 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿಗೆ ಸಲ್ಲಿಸಬೇಕೆಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ತಿಳಿಸಿದ್ದಾರೆ.



