Connect with us

Dvgsuddi Kannada | online news portal | Kannada news online

ದಾವಣಗೆರೆ ಲೋಕಸಭೆ; ಬಿಜೆಪಿಯಲ್ಲಿ ಬಣ ರಾಜಕೀಯ; ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರೇ ಅಭ್ಯರ್ಥಿ ಎಂದ ಸಿದ್ದೇಶ್ವರ್ ಬಣ

IMG 20240202 063507

ದಾವಣಗೆರೆ

ದಾವಣಗೆರೆ ಲೋಕಸಭೆ; ಬಿಜೆಪಿಯಲ್ಲಿ ಬಣ ರಾಜಕೀಯ; ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರೇ ಅಭ್ಯರ್ಥಿ ಎಂದ ಸಿದ್ದೇಶ್ವರ್ ಬಣ

ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಭಾರೀ ಪೈಪೋಟಿ ನಡೆಯುತ್ತಿದೆ. ಇದರ ನಡುವೆ ಜಿಲ್ಲೆಯಲ್ಲಿ ಎರಡು ಬಣಗಳಾಗಿದ್ದು, ಒಂದು ಬಣ ಹೊಸ ಅಭ್ಯರ್ಥಿ ಕಣಕ್ಕೆ ಇಳಿಸಬೇಕೆಂದು ಬೇಡಿಕೆ ಇಟ್ಟಿದೆ. ಈ ಬಾರಿಯೂ ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರೇ ಅಭ್ಯರ್ಥಿ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಸೇರಿ ಸಿದ್ದೇಶ್ವರ್ ಬಣ ಕಾರ್ಯಕರ್ತರ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

ಜಗಳೂರಿನ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ, ಸಂಸದ ಜಿ.ಎಂ.ಸಿದ್ದೇಶ್ವರ ನಾಲ್ಕು ಬಾರಿ ಹಾಗೂ ಅವರ ತಂದೆ ಎರಡು ಬಾರಿ ಸಂಸತ್‌ ಸದಸ್ಯರಾಗಿ ದಾವಣಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿ ಆಗಿ ಜಗಳೂರು ವಿಧಾನಸಭಾ ಕ್ಷೇತ್ರವೇ ಅತಿ ಹೆಚ್ಚು ಮತ ನೀಡಿ ಗೆಲ್ಲಿಸುವಂತಾಗಬೇಕು.ಪ್ರಳಯವಾದರೂ ದೇಶದಲ್ಲಿ ನರೇಂದ್ರ ಮೋದಿಯೇ ಪ್ರಧಾನಿ, ದಾವಣಗೆರೆ ಕ್ಷೇತ್ರದಲ್ಲಿ ಸಿದ್ದೇಶ್ವರ ಅವರೇ 5ನೇ ಬಾರಿ ಸಂಸದರು ಎಂದರು.

ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ 57 ಕೆರೆಗಳಿಗೆ ನೀರು ತುಂಬಿಸುವುದು, ಭದ್ರಾ ಮೇಲ್ದಂಡೆ ಸೇರಿ 3,500 ಕೋಟಿ ಅಧಿಕ ಹಣ ತಂದ ಅಭಿವೃದ್ಧಿ ಮಾಡಿದರೂ 400 ಮತಗಳ ಅಂತರ ಸೋಲು ನನಗೆ ಮಾತ್ರವಲ್ಲ, ಕಾರ್ಯಕರ್ತರಿಗೆ ದುಃಖ ತರಿಸಿದೆ ಎಂದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಾಗಿ ನಿಂತು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದು ತಿಳಿಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್‌ ಮಾತನಾಡಿ,‌ದಾವಣಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ, ಎಸ್ಸೆಸ್‌ ಮಲ್ಲಿಕಾರ್ಜುನ್ ಎದುರೇ ನಿಂತು ಅಲ್ಪ ಮತದಿಂದ ಸೋತಿದ್ದೇನೆ. ಕೆಲವರು 2013ರಲ್ಲಿ ನನಗೆ ಟಿಕೆಟ್ ತಪ್ಪಿಸಿದ್ದರು. ಟಿಕೆಟ್ ಪಡೆದ ಅಭ್ಯರ್ಥಿ ಈಗ ಎಲ್ಲಿದ್ದಾರೆ ತೋರಿಸಿ ಎಂದು ರವೀಂದ್ರನಾಥರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಮಾತನಾಡಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಮಾಧ್ಯಮಗಳೊಂದಿಗೆ ಸಂಸದರ ವಿರುದ್ಧ ಬೇರೆ ಜಿಲ್ಲೆಯವರಿಗೆ ಟಿಕೆಟ್ ಬೇಡ ಸ್ಥಳೀಯರಿಗೆ ಅವಕಾಶ ಕೊಡಿ ಎಂದು ಗೊಂದಲ ಸೃಷ್ಟಿಸಿದ್ದಾರೆ. ಗೊಂದಲ, ಸಮಸ್ಯೆಗಳಿದ್ದರೆ ರಾಜ್ಯಮಟ್ಟದಲ್ಲಿ ಅದನ್ನು ಬಗೆಹರಿಸಿಕೊಳ್ಳಬೇಕು. ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡಬಾರದು ಎಂದರು.

ಮಂಡಲ ಬಿಜೆಪಿ ಅಧ್ಯಕ್ಷ ಎಚ್.ಸಿ ಮಹೇಶ್ , ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಸ್ .ಕೆ. ಮಂಜುನಾಥ್, ಸವಿತಾ ಕಲ್ಲೇಶಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವೇಣುಗೋಪಾಲ ರೆಡ್ಡಿ, ಆರ್ಥಿಕ ಸ್ವಾಮಿ ಮತ್ತಿತರರು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿದ್ದಣ್ಣ, ಎಚ್ ನಾಗರಾಜ್, ಗಡಿ ಮಾಕುಂಟಿ ಸಿದ್ದೇಶ್, ಕೆಂಚನಗೌಡ, ಕಲ್ಲೇಶಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ದೇವರಾಜ್, ನವೀನ್, ಪಾಪು ಲಿಂಗಪ್ಪ, ಮುಖಂಡರಾದ ಓಬಳೇಶ್, ಹನುಮಂತಪ್ಪ, ವಿಶ್ವನಾಥಯ್ಯ, ಬೆಸ್ತಳ್ಳಿ ಬಾಬು ಶಿವಕುಮಾರ ಸ್ವಾಮೀಜಿ ಮತ್ತಿತರರು ಇದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top