ದಾವಣಗೆರೆ: ಭೀಕರ ಅಪಘಾತದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಕಾರು ಸಂಪೂರ್ಣ ಜಖಂಗೊಂಡಿದೆ.
ಜಿಲ್ಲೆಯ ಜಗಳೂರು ತಾಲ್ಲೂಕಿನ ತೌಡಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಪುಣಬಘಟ್ಟ ಗ್ರಾಮದ 23 ವರ್ಷದ ಸುರೇಶ್ ಮೃತ ಯುವಕನಾಗಿದ್ದಾನೆ. ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೆಲ್ಲದ ವ್ಯಾಪಾರಿಗಳಾಗಿದ್ದು, ಅಂಗಡಿಗಳಿಗೆ ಬೆಲ್ಲ ಹಾಕಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



