ಜಗಳೂರು: ಏ. 29ರಂದು ಜಗಳೂರು ಪಟ್ಟಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, 29ರಂದು ಬೆಳಿಗ್ಗೆ ಜಗಳೂರು ಪಟ್ಟಣಕ್ಕೆ ಸಿಎಂ ಆಗಮಿಸಲಿದ್ದಾರೆ. ವೇದಿಕೆ ಕಾರ್ಯಕ್ರಮ ನಗರದ ಗುರು ಭವನದ ಹತ್ತಿರ ಆಯೋಜಿಸಲಾಗಿದ್ದು, ಸ್ಥಳ ಪರಿಶೀಲನೆ ನಡೆದಿದ್ದೇವೆ. ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ರಿಷ್ಯಂತ್ ಜೊತೆ ಚರ್ಚಿಸಿ ಕ್ರಮ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಯಕ್ರಮ ಯಶಸ್ವಿಯಾಗಿ ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕಾಡಳಿತ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು.
ಶಾಸಕ ಎಸ್ ವಿ ರಾಮಚಂದ್ರ ಮಾತನಾಡಿ, ಸಿಎಂ ಭದ್ರ ಮೇಲ್ದಂಡೆ ಯೋಜನೆಯ 57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ನಡೆಯಲಿದೆ. ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ವಿ.ಐ.ಪಿ ಗೆಸ್ಟ್ ಹೌಸ್, ಕೆಎಸ್ಆರ್ ಟಿಸಿ ಬಸ್ ಡಿಪೋ, 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಟದ ಮೈದಾನ, ಕನ್ನಡ ಭವನ ಸೇರಿದಂತೆ 2,500 ಕೋಟಿಗೂ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಜಿ.ಪಂ ಸಿಇಒ ಡಾ. ಚೆನ್ನಪ್ಪ, ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್. ತಾ.ಪಂ ಇ ಓ ಲಕ್ಷ್ಮಿಪತಿಸಿ, ಪಿ.ಐ ಮಂಜುನಾಥ್ ಪಂಡಿತ್, ಪಿ.ಎಸ್.ಐ ಮಹೇಶ್ ಲಕ್ಷ್ಮಣ್ ಸೇರಿದಂತೆ ಮತ್ತಿತರರು ಇದ್ದರು.



