ದಾವಣಗೆರೆ: ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಯಚೂರು ಮೂಲದ ವ್ಯಕ್ತಿಯೊಬ್ಬರಿಗೆ 6. ಲಕ್ಷ ಮೌಲ್ಯದ ನಕಲಿ ಬಂಗಾರ ಬಿಲ್ಲೆ ನೀಡಿ, ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸಾತ್ಪಾಡಿ ಪ್ರಕಾಶ್ (30), ಹನುಮಂತಪ್ಪ (52) ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನಕಲಿ ಬಂಗಾರ ನೀಡಿ ವಂಚನೆ ಮಾಡಿದ 6 ಲಕ್ಷ ವಶಕ್ಕೆ ಪಡೆಯಲಾಗಿದೆ. ಸಹಾಯಕ ಎಸ್ ಪಿ ಕನ್ನಿಕಾ ಸಕ್ರಿವಾಲ್ ಮಾರ್ಗದರ್ಶನದಲ್ಲಿ ಪಿಎಸ್ ಐ ಬಸವರಾಜ್ ಸಿ.ಎನ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗೆ ಎಸ್ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



