ದಾವಣಗೆರೆ: ಸಿಡಿಲು ಬಡಿದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾಟಲಿಂಗಪ್ಪ(43) ಹಾಗೂ ರಾಜು(35) ಮೃತಪಟ್ಟರಾಗಿದ್ದಾರೆ. ಸ್ಥಳಕ್ಕೆ ಶಾಸಕ ಬಿ. ದೇವೇಂದ್ರಪ್ಪ, ತಹಶೀಲ್ದಾರ್ ಸಂತೋಷ್ ಭೇಟಿ ನೀಡಿದ್ದಾರೆ. ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



