ದಾವಣಗೆರೆ: ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಹೊಸದಾಗಿ ಜನ ಔಷಧಿ ಮಳಿಗೆಯನ್ನು ಪ್ರಾರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಫಾರ್ಮಾಸಿಸ್ಟ್ಗಳು ತಮ್ಮ ಅರ್ಹ ದಾಖಲೆಗಳೊಂದಿಗೆ ಅರ್ಜಿ ಅಥವಾ ಮನವಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ದಾವಣಗೆರೆ ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಎಸ್ಎಸ್ ಆಸ್ಪತ್ರೆ ಹಿಂಭಾಗ , ಎನ್ಸಿಸಿ ಕ್ಯಾಂಪ್ ಹತ್ತಿರ, ಶ್ರೀ ರಾಮನಗರ ರಸ್ತೆ ದಾವಣಗೆರೆ 577005, ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



