ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕ ಕುಂದು ಕೊರತೆಗಳ ನಿರ್ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ. ನಾಳೆ (ಸೆ. 25 ದಾವಣಗೆರೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದುಕೊರತೆ ಆಲಿಸಲು ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳ ಸಾರ್ವಜನಿಕ ಕುಂದುಕೊರತೆಯ
ನಿವರಣೆವ್ಯವಸ್ಥೆ(ಐಪಿಜಿಆರ್‌ಎಸ್)ತಂತ್ರಾಂಶಲ್ಲಿ ದಾಖಲಿಸಿ ಕುಂದುಕೊರತೆಗಳನ್ನು ದಾಖಲಿಸಲು ಪ್ರತ್ಯೇಕ ಇಲಾಖಾವಾರು ಕೌಂಟರ್‌ಗಳ ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಸುಲಿಗೆ; ಆರೋಪಿ ಬಂಧನ- 2.17 ಲಕ್ಷ ನಗದು, ಮೊಬೈಲ್ ವಶ