ಹರಿಹರ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ರೆ ಕಾಂಗ್ರೆಸ್ ಧೂಳಿಪಟವಾಗಲಿದೆ. ಜತೆಗೆ ಜಿಲ್ಲೆಯಲ್ಲಿ ಜೆಡಿಎಸ್‌ಗೆ 5 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದರು.
ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿ, ಅಲ್ಪಸಂಖ್ಯಾತರು ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣದಿಂದ ಸಿಎಂ ಇಬ್ರಾಹಿಂ ಸ್ಪರ್ಧಿಸಿದ್ದರೆ ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವು ಸುಲಭವಾಗುತ್ತದೆ.ಹೀಗಾಗಿ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಘೋಷಣೆ ಮಾಡಬೇಕು ಎಂದರು.