ದಾವಣಗೆರೆ: ಬೃಹತ್ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಭಾಗಿ; ಸಾವಿರ ಹುದ್ದೆಗಳಿಗೆ ಆಯ್ಕೆ ನಿರೀಕ್ಷೆ; ಕ್ಯೂ.ಆರ್ ಕೋಡ್ ಮೂಲಕ ನೋಂದಾಯಿಸಲು ಅವಕಾಶ- ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಅಕ್ಟೋಬರ್ 16 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 16 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಉದ್ಯೋಗ ಮೇಳದ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶದ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಮತ್ತು ಉದ್ಯೋಗಕ್ಕಾಗಿ ವೇದಿಕೆಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳವನ್ನು ಆಯೋಜಿಸಲು ಜಿಲ್ಲಾ ಆಡಳಿತ ಗುರಿ ಹೊಂದಿದೆ. ಇಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ ಯಿಂದ ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್‍ಗಳಲ್ಲಿ ಉತ್ತೀರ್ಣರಾದವರು ಭಾಗವಹಿಸಬಹುದಾಗಿದೆ. ಉದ್ಯೋಗ ನೀಡಲು 150 ಕ್ಕಿಂತಲೂ ಹೆಚ್ಚಿನ ಕಂಪನಿಗಳಲ್ಲಿ ಇಲ್ಲಿಗೆ ಆಹ್ವಾನಿಸಲಾಗುತ್ತಿದೆ. ಅದರಲ್ಲಿ ಐಟಿ, ಆಟೋಮೊಬೈಲ್, ಖಾಸಗಿ ಬ್ಯಾಂಕಿಂಗ್, ಟೆಕ್ಸ್‍ಟೈಲ್, ಫೈನಾನ್ಸ್, ಆರೋಗ್ಯ ಮತ್ತು ಫಾರ್ಮಸಿ, ಜ್ಯೂಯಲರಿ, ವಿಮಾ ಕಂಪನಿ, ಫರ್ಟಿಲೈಸರ್ ಕ್ಷೇತ್ರದಲ್ಲಿನ ವಿವಿಧ ಉದ್ಯೋಗದಾತರು ಭಾಗವಹಿಸುವರು.

ಮೇಳವು ಅ.16ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ರ ವರೆಗೆ ನಡೆಯಲಿದ್ದು ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬೇಕು. ಕಂಪನಿಯವರು ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡುವರು, ಜಿಲ್ಲೆಯ ಯುವ ಜನರು ಮೇಳದ ಉಪಯೋಗ ಮಾಡಿಕೊಳ್ಳಬೇಕೆಂದರು.
ನಿರುದ್ಯೋಗಿಗಳು, ವಿದ್ಯಾರ್ಥಿಗಳು ಕ್ಯೂ.ಆರ್ ಕೋಡ್ ಮೂಲಕ ಹೆಸರು ನೋಂದಾಯಿಸಿಕೊಳ್ಳುವ ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು.

FB IMG 1697113603710

ಇಸ್ರೇಲ್‍ನಲ್ಲಿ ಇಬ್ಬರು ಸುರಕ್ಷಿತ; ದಾವಣಗೆರೆ ಜಿಲ್ಲೆಯ ದಾವಣಗೆರೆಯ ಹಿಲ್ಡಾ ಮೊಂತೇರೋ ಮತ್ತು ದೊಣೆಹಳ್ಳಿಯ ಪ್ರಿಯದರ್ಶಿನಿಯವರು ಇಸ್ರೇಲ್‍ನಲ್ಲಿ ಇದ್ದು ಸುರಕ್ಷಿತವಾಗಿದ್ದಾರೆ. ಈಗಾಗಲೇ ಅವರ ಸಂಪರ್ಕವನ್ನು ಮಾಡಲಾಗಿದ್ದು ಸರ್ಕಾರ ನೀಡುವ ಸೂಚನೆಗಳನ್ನು ಪಾಲಿಸಲು ತಿಳಿಸಲಾಗಿದೆ. ಸಹಾಯ ಅಗತ್ಯವಿದ್ದಲ್ಲಿ ಇಸ್ರೇಲ್ ರಾಯಭಾರಿ ಕಚೇರಿಯ ಮೂಲಕ ಸಹಾಯ ನೀಡಲಾಗುತ್ತದೆ ಎಂದು ಅವರೊಟ್ಟಿಗೆ ಮಾತನಾಡಿದ್ದು ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *