ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತೆ ನೀಡಲು ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ
ಉದ್ಯೋಗದಾತ 40 ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ದಾವಣಗೆರೆ: ಮಾ.07 ಅಡಿಕೆ ಧಾರಣೆ; ಸ್ವಲ್ಪ ಏರಿಕೆ ಕಂಡ ದರ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , ಇಮೇಲ್ ಐಡಿ: dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.



