ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಬಂಧಿಸಿದಂತೆ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳಿಗೆ 45 ನರ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಆರು ತಿಂಗಳ ಅವಧಿಗೆ ಭರ್ತಿ ಮಾಡಿಕೊಳ್ಳಲಾಗುವುದು. ನ. 19 ರಂದು ನೇರ ಸಂದರ್ಶನ ಇರುತ್ತದೆ.
ಪಿಯುಸಿ, ನರ್ಸಿಂಗ್ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರದ ಮೂಲ ಹಾಗೂ ನಕಲ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಎನ್ ಸಿಸಿ ಕ್ಯಾಂಪ್ ಹತ್ತಿರ, ಶ್ರೀರಾಮನಗರ ರಸ್ತೆ, ದಾವಣಗೆರೆ.



