ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಗಳೂರು, ಚನ್ನಗಿರಿ ತಾಲ್ಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಹಾಗೂ ಚನ್ನಗಿರಿ ಪುರಸಭೆ ವ್ಯಾಪ್ತಿಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ರೂ. 6,000/-ಗಳ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾಗಿರಬೇಕು ಹಾಗೂ (ವಿಆರ್‍ಡಬ್ಲೂ) ಹುದ್ದೆಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ & (ಯುಆರ್‍ಡಬ್ಲೂ) ಹುದ್ದೆಗೆ ಆಯಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವಾಸವಿರಬೇಕು. ಜ.21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ನಮೂನೆ, ಎರಡು ಸ್ಟ್ಯಾಂಪ್ ಸೈಜ್ ಅಳತೆಯ ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ವಿಕಲಚೇತನರ ಗುರುತಿನಚೀಟಿ (ಯು.ಡಿ.ಐ.ಡಿ. ಕಾರ್ಡ್) ಜಾತಿ & ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಸಲ್ಲಿಸಬೇಕು.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ: 08192-263939 ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.