ದಾವಣಗೆರೆ: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಲ್ಲಿ ಪ್ರಸಕ್ತ ಸಾಲಿನ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ತರಬೇತಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.10 ಕೊನೆಯ ದಿನಾಂಕವಾಗಿರುತ್ತದೆ.
16 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ, ಯುವತಿಯರು ಎಸ್.ಎಸ್.ಎಲ್.ಸಿ , ಐಟಿಐ ಪಾಸ್ ಆಗಿರುವ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಯ ಟೂಲ್ ರೂಮ್ ಮಷಿನಿಸ್ಟ್ ತರಬೇತಿಯನ್ನು ಉಚಿತವಾಗಿ ನಡೆಸಲಾಗುವುದು. ಈ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಸಕ್ತ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಭಾವಚಿತ್ರ ನಕಲು ಪ್ರತಿಗಳೊಂದಿಗೆ ಕೇಂದ್ರಕ್ಕೆ ಭೇಟಿ ನೀಡಬೇಕು
ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಜಿಟಿಟಿಸಿ, 22 ಸಿ ಮತ್ತು ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ, ಹರಿಹರ. ದೂ.ಸಂ. 08192-243937, 9916908111, 8884488202, 8711913947 ಗೆ ಸಂಪರ್ಕಿಸಬಹುದು ಎಂದು ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



