ದಾವಣಗೆರೆ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, 15 ನೇ ಹಣಕಾಸು ಆಯೋಗ ಮತ್ತು ಪಿಎಂಅಭಿಯಾನ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಬಹುದು.
ಜಿಲ್ಲೆಯಲ್ಲಿ 2024-25 ಆರ್ಥಿಕ ವರ್ಷದಲ್ಲಿ ಅನುಮೋದನೆಯಾಗಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗೆ ಆಗಸ್ಟ್ 17 ರಂದು ಕಚೇರಿಗೆ ಸ್ವೀಕೃತಿಯಾದ ಅರ್ಜಿಗಳಲ್ಲಿ, ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಎಸ್.ಎಸ್. ಹೈಟೆಲ್ ಆಸ್ಪತ್ರೆ ಹತ್ತಿದ, ಎನ್.ಸಿ.ಸಿ ಕ್ಯಾಂಪ್ ಪಟ್ಟಿ, ಶ್ರೀರಾಮ ನಗರ ರಸ್ತೆ, ದಾವಣಗೆರೆ-577005, ಇಲ್ಲಿನ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸೆ.6 ರಂದು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತವಾಗಿ ಸಮರ್ಥನೀಯ ಪುರಾವೆಗಳೊಂದಿಗೆ ಸೆ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ರೇಣುಕಾರಾಧ್ಯ ತಿಳಿಸಿದ್ದಾರೆ.



