ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಗೌರವಧನ ಪಾವತಿ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೇಮಕಾತಿ ಮಾಡಿಕೊಳ್ಳಲಿದ್ದು, ಹನುಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಡಿ.23ರಿಂದ ಅರ್ಜಿ ಪಡೆಯಬಹುದಾಗಿದ್ದು, ಜ.8 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಪಂಚಾಯಿತಿ ಸಂಪರ್ಕಿಸಿ.